Belagavi NewsBelgaum NewsKannada NewsKarnataka News

*ಭಾರಿ ಮಳೆ ಎಚ್ಚರಿಕೆ: ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆ ಮತ್ತಷ್ಟು ದಿನ ಮುಂದುವರಿಯುವ ಸಾಧ್ಯತೆ ಇದ್ದು, 7 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಹಾಗೂ ಉಳಿದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಇರಲಿದೆ. 

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದ್ದು, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. 

ಮಳೆ ಜೊತೆ ಹೆಚ್ಚಿನ ಪ್ರಮಾಣದ ಗಾಳಿಯೂ ಇರುವ ಸಾಧ್ಯತೆ ಹಿನ್ನಲೆ ಮುನ್ನೆಚ್ಚರಿಕೆಯಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಗಾಳಿಯ ವೇಗ ಗಂಟೆಗೆ 35-45 ಕಿ.ಮೀ. ಇರಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಸಾಧಾರಣ ಮಳೆಯಾಗಲಿದೆ

ದಕ್ಷಿಣ ಒಳನಾಡು ಭಾಗದಲ್ಲೂ ಮಳೆಯಾಗಲಿದ್ದು, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಮತ್ತು ಹಾಸನದಲ್ಲಿ ಆರೆಂಜ್​ ಅಲರ್ಟ್​ ಇರಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. 

ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್​, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಬಳ್ಳಾರಿ ಮತ್ತು ವಿಜಯನಗರದಲ್ಲಿ ಮೋಡ ಕವಿದ ವಾತಾವಣರಣ ಅಥವಾ ತುಂತುರು ಮಳೆಯ ನಿರೀಕ್ಷೆ ಇದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button