*ಭಾರಿ ಮಳೆ ಎಚ್ಚರಿಕೆ: ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆ ಮತ್ತಷ್ಟು ದಿನ ಮುಂದುವರಿಯುವ ಸಾಧ್ಯತೆ ಇದ್ದು, 7 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಹಾಗೂ ಉಳಿದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಇರಲಿದೆ.  ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದ್ದು, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ.  ಮಳೆ ಜೊತೆ ಹೆಚ್ಚಿನ ಪ್ರಮಾಣದ ಗಾಳಿಯೂ ಇರುವ ಸಾಧ್ಯತೆ ಹಿನ್ನಲೆ ಮುನ್ನೆಚ್ಚರಿಕೆಯಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಗಾಳಿಯ ವೇಗ ಗಂಟೆಗೆ 35-45 ಕಿ.ಮೀ. ಇರಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಸಾಧಾರಣ ಮಳೆಯಾಗಲಿದೆ … Continue reading *ಭಾರಿ ಮಳೆ ಎಚ್ಚರಿಕೆ: ಅಲರ್ಟ್ ಘೋಷಣೆ*