Kannada NewsKarnataka NewsLatest
*ಮುಂದಿನ 24 ಗಂಟೆ ಭಾರಿ ಮಳೆ ಮುನ್ಸೂಚನೆ: ಜಿಲ್ಲೆ ಜನರಿಗೆ ಅಲರ್ಟ್ ಘೋಷಿಸಿದ ಡಿಸಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 24 ಗಂಟೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಜನರು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಸೂಚಿಸಿದ್ದಾರೆ.
ಇನ್ನು ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರೆದಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಧಾರಾಕಾರ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಐದು ದಿನಗಳವರೆಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.