
ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ಎರಡು ದಿನಗಳ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದರೆ, ಚಾಮರಾಜನಗರ, ಮಂಡ್ಯ, ಮೈಸೂರು, ದಾವಣಗೆರೆ, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೀದರ್ ಸೇರಿದಂತೆ ಕೆಲವೆಡೆ ಸಾಧಾರಣ ಮಳೆಯಾಗುತ್ತಿದೆ.
ಹಾಗೆಯೇ, ರಾಜ್ಯದ ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಜುಲೈ 27ರ ವರೆಗೂ ಮಳೆ ಮತ್ತಷ್ಟು ಚುರುಕು ಪಡೆಯಲಿದೆ.
ಹವಾಮಾನ ಇಲಾಖೆ ಪ್ರಕಾರ, ಜುಲೈ 27ರ ವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ. ಆದ್ದರಿಂದ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಳೆಯಿಂದ ಸಮಸ್ಯೆಯಾದರೆ ಈ ನಂಬರ್ ಕಾಲ್ ಮಾಡಿ
ಬೆಳಗಾವಿ ಜಿಲ್ಲೆಯಾದ್ಯಂತ ಹಾಗೂ ಪಕ್ಕದ ಮಹಾರಾಷ್ಟ್ರದಲ್ಲೂ ಭಾರಿ ವರ್ಷಧಾರೆ ಸುರಿಯುತ್ತಿದೆ. ಜಿಲ್ಲೆಯ ಜನರಿಗೆ ಮಳೆ ಮತ್ತು ಪ್ರವಾಹದಿಂದ ಸಮಸ್ಯೆಯಾದರೆ, ತಕ್ಷಣವೇ ಸ್ಪಂದಿಸಲು ಬೆಳಗಾವಿ ಜಿಲ್ಲಾಡಳಿತ ಸಾರ್ವಜನಿಕರ ಅನುಕೂಲಕ್ಕಾಗಿ ಸಹಾಯವಾಣಿ ಆರಂಭಿಸಿದೆ.
ಸಹಾಯವಾಣಿ ಬಗ್ಗೆ ಸ್ವತಃ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು, ಬೆಳಗಾವಿ ಜಿಲ್ಲೆಯ ಜನರಿಗೆ ಮಳೆ ಅಥವಾ ಪ್ರವಾಹ ಅಥವಾ ಮಳೆಯಿಂದ ಯಾವುದೇ ರೀತಿಯ ಸಮಸ್ಯೆ ಆದಲ್ಲಿ 0831-2407290 ಪೋಲೀಸರ ಸಹಾಯ 0831-2474054 ನಂಬರ್ ಗೆ ಫೋನ್ ಮಾಡಿ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ