ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿಗರು ವರುಣಾಘಾತಕ್ಕೆ ತತ್ತರಗೊಂಡಿದ್ದಾರೆ. ರಾತ್ರಿಯಿಡಿ ಗುಡುಗು ಸಹಿತ ಭಾರಿ ಮಳೆಯಿಂದಾಗಿ ಬೆಂಗಳೂರಿನ ಬಹುತೇಕ ಭಾಗಗಳು ಮುಳುಗಡೆಯಾಗಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ.
ತಡರಾತ್ರಿ ಆರಂಭವಾದ ಗುಡುಗು ಸಿಹಿತ ಮಳೆ ಬೆಳಿಗ್ಗೆ ಕೊಂಚ ವಿರಾಮ ಪಡೆಯುತ್ತಿದ್ದಂತೆ ಮತ್ತೆ ಮಳೆ ಆರ್ಭಟ ಆರಂಭವಾಗಿದ್ದು, ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿವೆ. ಮನೆಯಲ್ಲಿರುವ ವಸ್ತುಗಳು ನೀರುಪಾಲಾಗಿವೆ. ಬಹುತೇಕ ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಿದ್ದು, ಇಂಟರ್ ನೆಟ್ ಸೇವೆಯಲ್ಲಿಯೂ ಸಮಸ್ಯೆಯಾಗಿದೆ.
ಮಳೆಯಿಂದಾಗಿ ರಸ್ತೆಗಳು ನದಿಯಂತೆ ಉಕ್ಕಿ ಹರಿಯುತ್ತಿವೆ. ರಸ್ತೆಗಳಿಗೂ, ಕಾಲುವೆ, ಚರಂಡಿಗಳಿಗೂ ಯಾವುದೆ ವ್ಯತ್ಯಾಸವಿಲ್ಲದ ಸ್ಥಿತಿ. ಆರ್.ಆರ್,ನಗರ, ಗಿರಿನಗರ, ಹೊಸಕೆರೆಹಳ್ಳಿ ಸೇರಿದಂತೆ ಹಲವೆಡೆ ನೀರು ನಿಂತು ರಸ್ತೆಗಳು ಕೆರೆಗಳಾಗಿ ಮಾರ್ಪಟ್ತಿವೆ. ಮನೆಯ ಪಾರ್ಕಿಂಗ್ ಏರಿಯಾಗಳು, ಸಂಪೂರ್ಣ ನೀರಿನಿಂದ ತುಂಬಿದ್ದು, ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಬೆಂಗಳೂರಿನಲ್ಲಿ ಮಳೆ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ಥವಾಗಿದೆ. ಇನ್ನೂ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ