Karnataka News

*ಮತ್ತೆ ಮಳೆ ಅಬ್ಬರ: ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹಿಂಗಾರು ಮತ್ತೆ ಚುರುಕುಗೊಂಡಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದರೊಂದಿಗೆ ಮುಂದಿನ 24 ಗಂಟೆಗಳಲ್ಲಿ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ದಕ್ಷಿಣ ಒಳನಾಡಿನ ಬಹುತೇಕ ಕಡೆ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿನಲ್ಲೂ ಹಗುರದಿಂದ ಸಾಧಾರಣ ಮಳೆಯಾಗಲಿದೆ.

Home add -Advt

ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮುಂದಿನ 48 ಗಂಟೆಯವರೆಗೆ ಇದೇ ಸ್ಥಿತಿ ಮುಂದುವರಿಯಲಿದೆ. ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ತಾಪಮಾನ ಗರಿಷ್ಠ 27 ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Related Articles

Back to top button