
ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿ ಸಂಚಲನಸೃಷ್ಟಿಸಿ ಜೈಲು ಸೇರಿದ್ದ ಆರೋಪಿ ಚಿನ್ನಯ್ಯ, ಜೈಲಿನಿಂದ ಬಿಡುಗಡೆಯಾದ ಬಳಿಕ ಹೊಸ ರಾಗ ಹಾಡಿದ್ದಾನೆ. ತನಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿ ಬುರುಡೆ ಗ್ಯಾಂಗ್ ವಿರುದ್ಧವೇ ದೂರು ದಾಖಲಿಸಿದ್ದಾನೆ.
ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾಗಿ ಹೊರ ಬರುತ್ತಿದ್ದಂತೆ ಆರೋಪಿ ಚಿನ್ನಯ್ಯ, ತನಗೆ ಹಾಗೂ ತನ್ನ ಪತ್ನಿಗೆ ಜೀವ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾನೆ. ಅಲ್ಲದೇ ಬೆಳ್ತಂಗಡಿ ಠಾಣೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣೆವರ್, ವಿಠಲ ಗೌಡ, ಜಯಂತ್ ಹಾಗೂ ಸಮೀರ್ ಎಂಡಿ ಸೇರಿದಂತೆ ಐವರ ವಿರುದ್ಧ ದೂರು ದಾಖಲಿಸಿದ್ದಾನೆ.
ತನಗೆ ಹಾಗೂ ತನ್ನ ಹೆಂಡತಿಗೆ ಜೀವ ಬೆದರಿಕೆ ಇದ್ದು ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾನೆ.




