Latest

ಮಹಿಳಾ ಉದ್ಯಮಿಗಳಿಗಾಗಿ ಪ್ರತ್ಯೇಕ ಸಂಘ; ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಹಿಳಾ ಉದ್ಯಮಿಗಳಿಗೆ ಆರ್ಥಿಕವಾಗಿ ಸರ್ಕಾರದಿಂದ ನೆರವು ನೀಡಲು ಹಳ್ಳಿಗಳಲ್ಲಿರುವ ಮಹಿಳಾ ಸ್ವಸಹಾಯ ಸಂಘ ಮಾದರಿಯ ಮಹಿಳಾ ಉದ್ಯಮಿಗಳಿಗೆ ಪ್ರತ್ಯೇಕ ಸಂಘ ತೆರೆಯುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಹಿಳಾ ಉದ್ಯಮಿಗಳ ಬೃಹತ್ ಸಮ್ಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ, ಮಹಿಳಾ ಉದ್ಯಮಿಗಳಿಗೆ ಸರ್ಕಾರದಿಂದ ನೆರವು ನೀಡಲು ಹೊಸ ಸಂಘ ಸ್ಥಾಪನೆ ಮಾಡಲಾಗುವುದು. ಈ ಬಗ್ಗೆ ಅಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದರು.

ದೃಷ್ಟಿಚೇತನ, ವಿಕಲಚೇತನ ಮಹಿಳೆಯರಿಗೆ ವಿಶೇಷ ಯೋಜನೆ ಹಮ್ಮಿಕೊಳ್ಳಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಇಂದು ಸಂಜೆ ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Home add -Advt

Related Articles

Back to top button