Latest

7 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಮೂರನೇ ಅಲೆ ಆತಂಕದ ನಡುವೆಯೇ ವರುಣನ ಆರ್ಭಟ ಮತ್ತೆ ಆರಂಭವಾಗಿದ್ದು, ನಾಳೆವರೆಗೂ 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಆಗಸ್ಟ್ 8ರವರೆಗೂ ಭಾರಿ ಮಳೆಯಾಗಲಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ.

Home add -Advt

ಗುಡುಗು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ಆಗಸ್ಟ್ 8 ಹಾಗೂ 9ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಉತ್ತರ ಕರ್ನಾಟಕ ಜಿಲ್ಲೆಗಳಾದ ಧಾರವಾಡ, ಹಾವೇರಿ, ಗದಗ, ಬಿಜಾಪುರ, ಕಲಬುರ್ಗಿ, ಬೆಳಗಾವಿ, ರಾಯಚೂರು, ಯಾದಗಿರಿ, ಬೀದರ್ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

 

ಕೋವಿಡ್ ನಿರ್ಬಂಧದ ವಿರುದ್ಧ ಬಿಕಿನಿಯಲ್ಲಿ ಪ್ರತಿಭಟಿಸಿದ ಡಿ.ಜೆ

Related Articles

Back to top button