Latest

ರಾಜ್ಯದ ವಿವಿಧೆಡೆ ಮೂರು ದಿನ ಮತ್ತೆ ಭಾರಿ ಮಳೆ ಎಚ್ಚರಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಬೀಸುತ್ತಿರುವುದರಿಂದ ರಾಜ್ಯದ ವಿವಿಧೆಡೆ ಮೂರು ದಿನಗಳ ಕಾಲ ಮತ್ತೆ ಧಾರಾಕಾರ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮತ್ತೆ ಮಳೆ ಆರಂಭ ವಾಗಿದೆ. ದಕ್ಷಿಣ ಒಳನಾಡಿನಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರಿಯುತ್ತದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

Home add -Advt

ಬಂಗಾಳಕೊಲ್ಲಿಯಲ್ಲಿ ಮೇಲೆ ಸುಳಿಗಾಳಿ ಕಾಣಿಸಿಕೊಂಡಿದೆ. ಹೀಗಾಗಿ, ದಕ್ಷಿಣ ಒಳನಾಡಿನಲ್ಲಿ ಅದರಲ್ಲೂ ಮುಖ್ಯವಾಗಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆ, ತುಮಕೂರು, ಕೋಲಾರ, ಮೈಸೂರು, ಚಾಮರಾಜ ನಗರ ಮತ್ತಿತರ ಜಿಲ್ಲೆಗಳಲ್ಲಿ ಮಳೆ ಬರುತ್ತಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾದರೆ, ಇನ್ನೂ ಕೆಲವೆಡೆ ಸಾಧಾರಣ ಮಳೆಯಾಗುತ್ತದೆ. ಮತ್ತೆ ಕೆಲವೆಡೆ ಚದುರಿದಂತೆ ಹಗುರ ಮಳೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ಬೆತ್ತಲಾಗಿ ವಿಡಿಯೋ ಕಾಲ್ ಮಾಡಿದ ಯುವತಿ; BJP ಶಾಸಕ ತಿಪ್ಪಾರೆಡ್ಡಿಗೆ ಹನಿಟ್ರ್ಯಾಪ್ ಗೆ ಯತ್ನ

https://pragati.taskdun.com/politics/bjp-mlatippareddyhonytrap/

Related Articles

Back to top button