Latest

*ಅಂಡರ್ ಪಾಸ್ ನಲ್ಲಿ ಕಾರು ಮುಳುಗಡೆ; ಮೃತ ಯುವತಿ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಬೆಂಗಳೂರಿನಲ್ಲಿ ವರುಣಾರ್ಭಟಕ್ಕೆ ಕೆ.ಆರ್.ಸರ್ಕಲ್ ಅಂಡರ್ ಪಾಸ್ ನಲ್ಲಿ ಕಾರು ಮುಳುಗಡೆಯಾಗಿ ಯುವತಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಯುವತಿ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 5 ಲಕ್ಷ ಪರಿಹಾರ ನಿಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಂಡರ್ ಪಾಸ್ ನಲ್ಲಿ ಕಾರು ಮುಳುಗಡೆಯಾಗಿ ವಿಜಯವಾಡ ಮೂಲದ ಕುಟುಂಬದ 6 ಸದಸ್ಯರು ಸಂಕಷ್ಟಕ್ಕೆ ಸಿಲುಕಿದ್ದರು. ಅವರಲ್ಲಿ ನಾಲ್ವರನ್ನು ರಕ್ಷಿಸಲಾಗಿದ್ದು, ಇನ್ನಿಬ್ಬರಿಗಾಗಿ ಶೋಧ ಮುಂದುವರೆದಿದೆ. ನಾಲ್ವರ ಪೈಕಿ ಯುವತಿ ತೀವ್ರ ಅಸ್ವಸ್ಥಗೊಂಡು ಚಿಕಿತ್ಸೆ ಫಲ್ಕಾರಿಯಾಗದೇ ಸೆಂಟ್ ಮಾರ್ಥಾಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ಸಿಎಂ ಸಿದ್ದರಾಮಯ್ಯ, ಮೃತ ಯುವತಿ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಅಸ್ವಸ್ಥಗೊಂಡವರ ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ.

ಇನ್ಫೋಸಿಸ್ ಉದ್ಯೋಗಿಯಾಗಿದ್ದ 22 ವರ್ಷದ ಭಾನುರೇಖಾ ದುರಂತದಲ್ಲಿ ಮೃತಪಟ್ಟ ಯುವತಿ. ಭಾನುರೇಖಾ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಾಗಿದ್ದರು. ಮೂಲತ: ವಿಜಯವಾಡ ಮೂಲದವರಾಗಿದ್ದು, ಕುಟುಂಬ ಸದಸ್ಯರು ಬೆಂಗಳೂರು ನಗರವನ್ನು ನೋಡಲೆಂದು ತೆರಳಿದ್ದರು. ಆದರೆ ವರುಣಾರ್ಭಟಕ್ಕೆ ಸಿಲುಕಿ ಅವರು ತೆರಳುತ್ತಿದ್ದ ಕಾರು ಅಂಡರ್ ಪಾಸ್ ನಲ್ಲಿ ಮುಳುಗಡೆಯಾಗಿ ದುರಂತ ಸಂಭವಿಸಿದೆ.

https://pragati.taskdun.com/heavy-rainbangalorek-r-circleunder-pas-tragidygirl-death/

Home add -Advt

Related Articles

Back to top button