Belagavi NewsBelgaum NewsKannada NewsKarnataka NewsLatest

*ಬೆಳಗಾವಿ: ಬಿರುಗಾಳಿ ಮಳೆಗೆ ಧರೆಗುಳಿದ ವಿದ್ಯುತ್ ಕಂಬಗಳು; ಜನಜೀವನ ಅಸ್ಥವ್ಯಸ್ಥ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಅರಣ್ಯ ಪ್ರದೇಶದಲ್ಲಿ ಮುಂದುವರೆದ ಮಳೆಯಿಂದಾಗಿ ಲೋಂಡಾ, ಕಣಕುಂಬಿ, ಭೀಮಗಡ ಮತ್ತು ಜಾಂಬೋಟಿ‌ ಭಾಗದ ವಿವಿಧ ಗ್ರಾಮಗಳಿಗೆ ವಿದ್ಯುತ್ ಪೂರೈಸುವ ಕಂಬಗಳು ಧರೆಗುರುಳಿವೆ.

Home add -Advt

ಘಟ್ಟ ಪ್ರದೇಶದಲ್ಲಿ ಮಳೆಯೊಂದಿಗೆ ಜೋರಾಗಿ ಬೀಸುವ ಗಾಳಿಗೆ ನೂರಾರು ಮರಗಳು, 20 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ.

ಹೆಸ್ಕಾಂ ಸಿಬ್ಬಂದಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿ ಕಂಬಗಳನ್ನು ಬದಲಾಯಿಸಲು ಬಿರುಗಾಳಿ ಮತ್ತು ಮಳೆ‌ ಅಡಚಣೆ ಉಂಟುಮಾಡಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಮತ್ತು ಗ್ರಾಪಂ ಸಿಬ್ಬಂದಿ ಉರುಳಿ ಬಿದ್ದ ಮರಗಳ‌ ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ.

Related Articles

Back to top button