ಪ್ರಗತಿವಾಹಿನಿ ಸುದ್ದಿ: ಎರಡು ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ ಕೊಂಚ ಕಡಿಮೆಯಾಗಿದ್ದ ಮಳೆಯ ಅಬ್ಬರ ಇಂದು ಜೋರಾಗಿದೆ. ಸಂಜೆಯಾಗುತ್ತಿದ್ದಂತೆ ವರುಣ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಬೆಂಗಳೂರು ಸೇರಿದಂತೆ ಸುತ್ತಮುತ್ತ ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳು ಜಲಾವೃತಗೊಂಡಿವೆ.
ಸಂಜೆಯಾಗುತ್ತಿದ್ದಂತೆ ಬೆಂಗಳೂರಿನಲ್ಲಿ ಗುಡುಗು ಮಳೆ ಆರಂಭವಾಗಿದ್ದು, ಏಕಏಕಿ ಸುರಿದ ಧಾರಾಕಾರ ಮಳೆಯಿಮ್ದಾಗಿ ವಾಹನ ಸವಾರರು ಪರದಾಡಿದ್ದಾರೆ. ಕಚೇರಿಗಳಿಂದ ಮನೆಗೆ ವಾಪಾಸ್ ಆಗುತ್ತಿದ್ದ ಹಲವರು ಟ್ರಾಫಿಕ್ ಜಾಮ್, ಮಳೆಯಲ್ಲಿ ಸಿಲುಕಿಕೊಂಡಿದ್ದು, ತೊಂದರೆ ಅನುಭವಿಸಿದ್ದಾರೆ.
ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಹಲವೆಡೆ ಮನೆಗಳು ಜಲಾವೃತಗೊಂಡಿವೆ. ಇನ್ನು ಹಲವೆಡೆ ರಸ್ತೆಗಳ ಮೇಲೆ ನದಿಯಂತೆ ನೀರು ಹರಿದಿದ್ದು, ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಮೆಜೆಸ್ಟಿಕ್, ಶಾಂತಿನಗರ, ಆರ್.ಆರ್.ನಗರ, ನಾಯಂಡಹಳ್ಳಿ, ಗಿರಿನಗರ, ಮೈಸೂರು ರಸ್ತೆ, ವಿಜಯನಗರ, ರಿಚ್ ಮಂಡ್ ಸರ್ಕಲ್ ಸೇರಿದಂತೆ ಬಹುತೇಕ ಕಡೆಗಳಲ್ಲಿ ಮಳೆಯಿಂದಾಗಿ ಟ್ರಾಫಿಕ್ ಜಾಮ್ ಸಂಭವಿಸಿದ್ದು, ಅವಾಂತರಗಳು ಸೃಷ್ಟಿಯಾಗಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ