
ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ರಾಜ್ಯಾದ್ಯಂತ ವರುಣಾರ್ಭಟ ಜೋರಾಗಿದ್ದು, ವಾಹನ ಚಲಾವಣೆ ಮಾಡುವವರು ಎಷ್ಟು ಎಚ್ಚರಿಕೆ ವಹಿಸಿದರೂ ಕಡಿಮೆಯೆ. ಭಾರಿ ಮಳೆಯಿಂದ ಚಾಲಕರ ನಿಯಂತ್ರಣ ತಪ್ಪಿದ ಎರಡು ಕಾರುಗಳು ಹೇಮಾವತಿ ನದಿಗೆ ಉರುಳಿ ಬಿದ್ದಿರುವ ಘಟನೆ ಚಿಕ್ಕಮಗಳೂರಿನ ಬಣಕಲ್ ಬಳಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಮಳೆ ಅಬ್ಬರಕ್ಕೆ ಚಾಲಕರ ನಿಯಂತ್ರಣ ತಪ್ಪಿದ ಕಾರುಗಳು ರಸ್ತೆಯಿಂದ ಉರುಳಿ ಹೇಮಾವತಿ ನದಿಗೆ ಬಿದ್ದಿವೆ.
ಪುತ್ತೂರಿನಿಂದ ಚಿಕ್ಕಮಗಳೂರಿನ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಹಾಗೂ ಸ್ವಿಫ್ಟ್ ಕಾರುಗಳು ನದಿಗೆ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಎರಡೂ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ