ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕಳೆದ 10 ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಹಾನಿಯುಂಟಾಗಿದೆ. ಈ ನಿಟ್ಟಿನಲ್ಲಿ ಮಳೆಹಾನಿ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನಾಳೆಯಿಂದ ಎರಡು ದಿನಗಳ ಕಾಲ ಕರಾವಳಿ, ಮಲೆನಾಡು ಭಾಗದ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಮಂಗಳೂರು ಜಿಲ್ಲೆಗಳಿಗೆ ನಾಳೆ ಭೇಟಿ ನೀಡುತ್ತೇನೆ. ಭೂಕುಸಿತ, ಮನೆ ಹಾನಿ, ಗುಡ್ದಕುಸಿತ ಸೇರಿದಂತೆ ಮಳೆಹಾನಿ ಪ್ರದೇಶಗಳ ಬಗ್ಗೆ ಪರಿಶೀಲನೆ ನಡೆಸಿ, ಅಧಿಕಾರಿಗಳ ಜತೆ ಸಭೆ ನಡೆಸುತ್ತೇನೆ ಎಂದರು.
ನಾಳೆ ಸಂಜೆ ಉಡುಪಿಯಲ್ಲಿಯೇ ವಾಸ್ತವ್ಯ ಮಾಡುತ್ತೇನೆ. ನಾಡಿದ್ದು ಕಾರವಾರ ಜಿಲ್ಲೆಗೆ ಭೇಟಿ ನೀಡಿ ಅಲ್ಲಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ. ಸಂತ್ರಸ್ತರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.
ಈಗಾಗಲೇ ಮಳೆ ಹಾನಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿ ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ. ನಾಳೆಯಿಂದ ಮಳೆ ಹಾನಿ ಪ್ರದೇಶಕ್ಕೆ ಖುದ್ದು ಭೇಟಿ ನೀಡುತ್ತೇನೆ ಎಂದು ಹೇಳಿದರು.
ಉದ್ಯಮಿ ವಿಜಯ್ ಮಲ್ಯಗೆ ಜೈಲು ಶಿಕ್ಷೆ ಪ್ರಕಟಿಸಿದ ಸುಪ್ರೀಂ ಕೋರ್ಟ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ