ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದು, ರಕ್ಷಣಾ ಹಾಗೂ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಮ್ ಅವರ 36 ನೇ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಕರಾವಳಿ ಮತ್ತು ಕೊಡಗು ಭಾಗಗಳಲ್ಲಿ ಮನೆಗಳಿಗೆ ಹಾನಿಯುಂಟಾಗಿರುವುದರಿಂದ ಎಸ್.ಡಿ.ಆರ್.ಎಫ್ ಮತ್ತು ಎನ್.ಡಿ.ಆರ್.ಎಫ್ ತಂಡವನ್ನು ನಿಯೋಜಿಸಿ ರಕ್ಷಣಾ ಕಾರ್ಯವನ್ನು ಮೊದಲು ಆದ್ಯತೆಯ ಮೇಲೆ ಕೈಗೊಳ್ಳಬೇಕು. ರಕ್ಷಣಾ ಕಾರ್ಯದ ನಂತರ ಪರಿಹಾರ ಕಾರ್ಯ ನಡೆಯಲಿದೆ ಎಂದರು.
ಹಗೆತನ ದಮನಿಸಬೇಕು:
ಹುಬ್ಬಳ್ಳಿಯಲ್ಲಿ ಚಂದ್ರಶೇಖರ್ ಗುರೂಜಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ ವೈಯಕ್ತಿಕ ಹಗೆತನ, ದ್ವೇಷ ಸಮಾಜದಲ್ಲಿ ಹೆಚ್ಚಾಗಿದೆ. ಅದರಲ್ಲೂ ಯುವಕರಲ್ಲಿ ಈ ರೀತಿಯ ಪ್ರವೃತ್ತಿ ಹೆಚ್ಚಾಗಿದೆ. ಎಲ್ಲರೂ ಸೇರಿ ಇದನ್ನು ದಮನ ಮಾಡಬೇಕು. ಕಾನೂನನ್ನು ಇನ್ನಷ್ಟು ಬಿಗಿ ಮಾಡಬೇಕು ಎಂದರು.
ಸಿದ್ದರಾಮಯ್ಯ ಹುಟ್ಟುಹಬ್ಬ ಹಿನ್ನೆಲೆ; 62 ಸದಸ್ಯರ ಕಾಂಗ್ರೆಸ್ ವಿಶೇಷ ಸಮಿತಿ ರಚನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ