
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದ ಕರಾವಳಿಯಲ್ಲಿ ಈಗಾಗಲೇ ಮಳೆಯಬ್ಬರ ಹೆಚ್ಚಿದ್ದು ಇನ್ನೂ 5 ದಿನಗಳ ಕಾಲ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಪರೀತ ವರ್ಷಧಾರೆಗೆ ಈಗಾಗಲೇ ಕರಾವಳಿಯ ಜನಜೀವನ ಅಸ್ತವ್ಯಸ್ತಗೊಂಡಿದ್ದು ಇದೇ ವೇಳೆ ನೈಋತ್ಯ ಮುಂಗಾರು ಇನ್ನಷ್ಟು ಚುರುಕುಗೊಂಡಿದೆ. ಇದರಿಂದಾಗಿ ಮೇಲ್ಮೈ ಸುಳಿಗಾಳಿ ತೀವ್ರಗೊಂಡು ಕರಾವಳಿ ಪ್ರದೇಶದ ಪಶ್ಚಿಮಘಟ್ಟದ ಪ್ರದೇಶದಲ್ಲಿ ಭಾರಿ ಮಳೆ ಸುರಿಯಲಿದೆ.
40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವುದರಿಂದಾಗಿ ಸಮುದ್ರದಲ್ಲಿ ಅಪಾಯಕಾರಿ ಸನ್ನಿವೇಶ ಸೃಷ್ಟಿಯಾಗಿದೆ. ಕಡಲಿನಲ್ಲಿ ಯಾಂತ್ರಿಕ ಮೀನುಗಾರಿಕೆ ನಿಷೇಧವಿದ್ದರೂ ಇತರ ಮೀನುಗಾರರು ಕಡಲಿಗೆ ಇಳಿಯದಂತೆ ಐಎಂಡಿ ಐಎಂಡಿ ಎಚ್ಚರಿಕೆ ನೀಡಿದೆ.
ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲಾ ಆಡಳಿತಗಳು ಕೂಡ ಈಗಾಗಲೇ ಪ್ರಕಟಣೆ ಹೊರಡಿಸಿ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿವೆ.
ಜಿಎಸ್ ಟಿ ತೆರಿಗೆ ವಿಧಾನವನ್ನು ಸಮರ್ಥವಾಗಿ ನಿಭಾಯಿಸಿರುವ ರಾಜ್ಯ ಕರ್ನಾಟಕ