Kannada NewsKarnataka NewsLatest
ವ್ಯಾಪಕ ಮಳೆ: ಹಲವೆಡೆ ಬೆಳೆ ಹಾನಿ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ತಾಲೂಕಿನ ಹಲವೆಡೆ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿ ಸಂಭವಿಸಿದೆ.
ಕೋಥಳಿ ಸುತ್ತಮುತ್ತ ಅಪಾರ ಪ್ರಮಾಣದಲ್ಲಿ ಮಳೆ ಸುರಿದು ಜೋಳ, ಗೋವಿನಜೋಳ, ಕಬ್ಬು, ತಂಬಾಕು ಸೇರಿದಂತೆ ಹಲವಾರು ಬೆಳೆಗಳು ಹಾನಿಗೀಡಾಗಿವೆ.
ಕೂಡಲೇ ಅಧಿಕಾರಿಗಳು ಭೇಟಿ ನೀಡಿ ಬೆಳೆ ಹಾನಿ ಸಮೀಕ್ಷೆ ನಡೆಸಬೇಕೆನ್ನುವುದು ರೈತರ ಆಗ್ರಹವಾಗಿದೆ.


