ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸೋಮವಾರ ಬೆಳಗ್ಗೆಯಿಂದ ವ್ಯಾಪಕ ಮಳೆ ಸುರಿಯತೊಡಗಿದೆ.
ಭಾನುವಾರ ಅಲ್ಲಲ್ಲಿ ತುಂತುರು ಮಳೆ ಸುರಿದಿತ್ತಾದರೂ ಈದ್ ಮಿಲಾದ್ ಹಾಗೂ ವಾಲ್ಮೀಕಿ ಜಯಂತಿ ಸಂಭ್ರಮಗಳು ಅಬಾಧಿತವಾಗಿದ್ದವು. ಸೋಮವಾರ ದಟ್ಟ ಮೋಡಗಳು ಆಚ್ಛಾದಿತವಾಗಿ ನಿರಂತರ ಮಳೆ ಆರಂಭಗೊಂಡಿದೆ.
ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಅ.12ರವರೆಗೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜಿಲ್ಲೆಯ ಬೆಳಗಾವಿ ಹಾಗೂ ಗ್ರಾಮಾಂತರ, ಖಾನಾಪುರ, ಚಿಕ್ಕೋಡಿ, ಹುಕ್ಕೇರಿ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಹೊಲಗದ್ದೆಗಳಲ್ಲಿ ನೀರು ನಿಂತು ರೈತರು ಸಂಕಷ್ಟ ಪಡುವಂತಾಗಿದೆ. ನಿಪ್ಪಾಣಿ ಭಾಗದಲ್ಲಿ ಸಣ್ಣ ಪ್ರಮಾಣದ ಮಳೆ ಸುರಿಯತೊಡಗಿದ್ದು ಗೋಕಾಕ ಸುತ್ತಮುತ್ತಲಿನ ಭಾಗದಲ್ಲಿ ಮೋಡ ಕವಿದ ವಾತಾವರಣವಿದೆ.
ಏತನ್ಮಧ್ಯೆ ನೆರೆಯ ಉತ್ತರ ಕನ್ನಡ ಜಿಲ್ಲೆಯ ಮಲೆನಾಡು ಭಾಗದಲ್ಲೂ ವ್ಯಾಪಕ ಮಳೆ ಸುರಿಯುತ್ತಿದ್ದು ಕರಾವಳಿ ಭಾಗದಲ್ಲಿ ವಾತಾವರಣ ಸಹಜವಾಗಿದೆ.
ವಿದ್ಯಾರ್ಥಿನಿ ಮೇಲೆ ಹರಿದ ಬಿಎಂಟಿಸಿ ಬಸ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ