Uncategorized

*ಮನೆ ಕುಸಿದು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಪುಟ್ಟ ಕಂದಮ್ಮ ; ಚಿಕಿತ್ಸೆ ಫಲಿಸದೇ ಸಾವು*

ಪ್ರಗತಿವಾಹಿನಿ ಸುದ್ದಿ; ಹಾವೇರಿ: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಮನೆಗಳು ಕುಸಿದು ಬಿದ್ದು ದುರಂತಗಳು ಸಂಭವಿಸಿವೆ. ಈ ನಡುವೆ ಹಾವೇರಿಯಲ್ಲಿ ಮಾಳಪುರ ಗ್ರಾಮದಲ್ಲಿ ಮನೆ ಕುಸಿದು ಬಿದ್ದು, ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಹಾವೇರಿಯ ಮಾಳಪುರ ಗ್ರಾಮದಲ್ಲಿ ಬಿರುಗಾಳಿ ಮಳೆಯಿಂದಾಗಿ ಎರಡು ದಿನಗಳ ಹಿಂದೆ ಮನೆ ಕುಸಿದುಬಿದ್ದಿತ್ತು. ಘಟನೆಯಲ್ಲಿ 2 ವರ್ಷದ ಕಂದಮ್ಮ ಭಾಗ್ಯ ಗಂಭೀರವಾಗಿ ಗಾಯಗೊಂಡಿತ್ತು. ಮಗುವನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಕೊನೆಯುಸಿರೆಳೆದಿದೆ. ಪುಟ್ಟ ಮಗು, ಮನೆ ಕಳೆದುಕೊಂಡಿರುವ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button