Karnataka News

*ಮತ್ತೆ ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಭಾರಿ ಮಳೆ ಮುನ್ಸೂಚನೆ ನೀಡಲಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Home add -Advt

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಅಬ್ಬರ ಕಡಿಮೆಯಾಗಲಿದೆ. ವಿಜಯನಗರ, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

Related Articles

Back to top button