Latest

ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ; ಭೂಕುಸಿತದ ಜತೆಗೆ ಮತ್ತೆ ಕಂಪಿಸಿದ ಭೂಮಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆದಿದ್ದು, ಇಂದಿನಿಂದ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಲಿದ್ದು, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಹಾಸನ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ನಡುವೆ, ಭೂಕುಸಿತ, ಭೂಕಂಪನವಾಗುತ್ತಿದೆ. ಮಡಿಕೇರಿಯ ಚೆಂಬು, ಸಂಪಾಜೆ, ಕರಿಕೆ, ಗೂನಡ್ಕ ಭಾಗಗಳಲ್ಲಿ ಇಂದು ಮುಂಜಾನೆ ಮತ್ತೆ ಭೂಕಂಪನವಾಗಿದೆ. ಕೊಡಗಿನಲ್ಲಿ ಕಳೆದ ಒಂದು ವಾರದಲ್ಲಿ 10ನೇ ಬಾರಿಗೆ ಭೂಮಿ ಕಂಪಿಸಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿಸುತ್ತಿದೆ.
ನದಿ ಸ್ನಾನಕ್ಕಿಳಿದ ನಾಲ್ವರು ಸೋದರರಲ್ಲಿ ಮೂವರ ಸಾವು; ಓರ್ವ ನಾಪತ್ತೆ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button