Kannada NewsKarnataka NewsLatest
78.40 ಲಕ್ಷ ರೂ. ವೆಚ್ಚದಲ್ಲಿ ಮನೆ ಮನೆಗೆ ನೀರು ಯೋಜನೆ ಜಾರಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ - ಕರ್ನಾಟಕ ಸರ್ಕಾರದ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಮೋದಗಾ ಗ್ರಾಮದಲ್ಲಿ ಮನೆ ಮನೆಗೆ ನಲ್ಲಿ ನೀರು ಪೂರೈಸುವ ಯೋಜನೆಗೆ ಸೋಮವಾರ ಚಾಲನೆ ನೀಡಲಾಯಿತು.
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಯೋಜನೆ ಮಂಜೂರಾಗಿದ್ದು, ಸ್ಥಳೀಯ ಜನಪ್ರತಿನಿಧಿಗಳು ಕಾಮಗಾರಿಗೆ ಚಾಲನೆ ನೀಡಿದರು. ಜಲಜೀವನ್ ಮಿಷನ್ ಯೋಜನೆಯಡಿ ಯೋಜನೆಗೆ 78.40 ಲಕ್ಷ ರೂ. ಮಂಜೂರಾಗಿದೆ. ಪ್ರತಿ ಮನೆಗೆ ಪೈಪ್ ಲೈನ್ ಮೂಲಕ ನೀರು ಪೂರೈಸುವ ಯೋಜನೆ ಇದಾಗಿದೆ. ಪಿಕೆಪಿಎಸ್ ನ ಅಧ್ಯಕ್ಷ ಗಂಗಣ್ಣ ಕಲ್ಲೂರ, ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಹಾಗೂ ಪಿಕೆಪಿಎಸ್ ನ ಸದಸ್ಯರೆಲ್ಲರೂ ಸೇರಿ ಭೂಮಿ ಪೂಜೆಯ ಮೂಲಕ ಕಾಮಗಾರಿಗೆ ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನ ಪ್ರತಿನಿಧಿಗಳು, ತಾಲೂಕ ಪಂಚಾಯತ್ ಸದಸ್ಯರಾದ ಯರಗಟ್ಟಿ ಮುಂತಾದವರು ಉಪಸ್ಥಿತರಿದ್ದರು.


