ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ರಾಜ್ಯದಲ್ಲಿ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಮುಖವಾಗಿ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಪರಿಣಾಮ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ.
ಇನ್ನು ದೇಶದಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ ಶೇ.27ರಹ್ಟು ಹೆಚ್ಚು ಮಳೆಯಾಗಿದೆ.
ಮಹಿಳಾ ಪೊಲೀಸ್ ಪೇದೆಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ