
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಳೆದ ಎರಡು ಮೂರು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ರಾಜ್ಯಾದ್ಯಂತ ಇನ್ನೂ ನಾಲ್ಕು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಗುಡು ಸಹಿತ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಕಲಬುರ್ಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ಬೆಂಗಳೂರು, ಕರಾವಳಿಯ ಮೂರು ಜಿಲ್ಲೆಗಳು, ದಕ್ಷಿಣ ಒಳನಾಡು, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಿದ ಪರಿಣಾಮ ರಾಜ್ಯದ್ಯಂತ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸತತ 5ನೇ ದಿನವೂ ಬೆಲೆ ಏರಿಕೆ; 100 ದಾಟಿತು ಡಿಸೆಲ್ ದರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ