ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಕರ್ನಾಟಕದಲ್ಲಿ ಮುಂದಿನ 48 ಗಟೆಗಳಲ್ಲಿ ಭಾರಿ ಮಳೆಯಾಗಲಿದ್ದು, ಬೆಳಗಾವಿ ಸೇರಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈಗಾಗಲೇ ಕರಾವಳಿ, ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ಮುಂದಿನ 48 ಗಂಟೆಗಳ ಕಾಲ ಗಾಳಿಯ ವೇಗ ಇನ್ನಷ್ಟು ಹೆಚ್ಚಲಿದೆ. ಗಂಟೆಗೆ 60.ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಬೆಳಗಾವಿ ಹಾಗೂ ಹಾಸನ ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡು ಜಿಲ್ಲೆಗಳಾದ ಬೀದರ್, ಕಲಬುರ್ಗಿ ಜಿಲ್ಲೆಗಳಲ್ಲಿ ಜುಲೈ 18ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನೈರುತ್ಯ ಮುಂಗಾರು ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಚುರುಕಾಗಿದೆ. ಜುಲೈ 19ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಾಲಿನ ಉತ್ಪನ್ನಗಳ ಬೆಲೆ ಏರಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ