
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕರಾವಳಿ, ಮಲೆನಾಡು ಜಿಲ್ಲೆಗಳ ಜನರು ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಅವಾಂತರದಿಂದ ಕಂಗಾಲಾಗಿದ್ದಾರೆ. ಈ ಮಧ್ಯೆ ಇನ್ನೂ ಕೆಲ ದಿನಗಳವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಮೂರು ದಿನ ಆರೇಂಜ್ ಅಲರ್ಟ್ ಹಾಗೂ ಉತ್ತರ ಒಳನಾಡಿನಲ್ಲಿ 5 ದಿನ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಳೆಯ ಆರ್ಭಟಕ್ಕೆ ಕುಸಿದು ಬಿದ್ದ ಮನೆ ಮೇಲ್ಛಾವಣಿ; ಮಹಿಳೆ ದುರ್ಮರಣ