Kannada NewsLatest

ಬೆಳಗಾವಿ ಧಾಮನೆ ಗ್ರಾಮದಲ್ಲಿ ಎಂಇಎಸ್ ಪುಂಡಾಟ; 10 ಜನರು ಪೊಲೀಸ್ ವಶಕ್ಕೆ

 

Home add -Advt

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆಯ ಧಾಮನೆ ಗ್ರಾಮದಲ್ಲಿ ಮದುವೆ ಮೆರವಣಿಗೆ ವೇಳೆ ಎಂಇಎಸ್ ಕಾರ್ಯಕರ್ತರ ಪುಂಡಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 10 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಧಾಮನಿ ಗ್ರಾಮದಲ್ಲಿ ನಿನ್ನೆ ರಾತ್ರಿ ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಕನ್ನಡ ಹಾಡು ಹಾಕಿದ್ದಕ್ಕೆ ದಾಳಿ ನಡೆಸಿದ್ದ ಎಂಇಎಸ್ ಕಾರ್ಯಕರ್ತರು, ವಧು-ವರರು ಹಾಗೂ ನೆರೆದಿದ್ದ ಜನರ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ಬಗ್ಗೆ ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಕುಟುಂಬದವರು ದೂರು ದಾಖಲಿಸಿದ್ದರು. ಇದೀಗ ಹಲ್ಲೆ ಪ್ರಕರಣ ಸಂಬಂಧ 10 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಬಿಗಿ ಭದ್ರತೆ ಒಡಗಿಸಲಾಗಿದೆ.

 

ಬೆಳಗಾವಿ; ಮದುವೆ ಮೆರವಣಿಗೆ ವೇಳೆ ಎಂಇಎಸ್ ದಾಂಧಲೆ

Related Articles

Back to top button