ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಕಳೆದ ಕೆಲ ದಿನಗಳಿಂದ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಕೇರಳ ರಾಜ್ಯಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಆಂಧ್ರಪ್ರದೇಶದಲ್ಲಿ ಭಾರಿ ಮಳೆ ಅವಾಂತರಕ್ಕೆ ಈವರೆಗೆ 17 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಕಡಪ ಹಾಗೂ ಚಿತ್ತೂರು ಜಿಲ್ಲೆಗಳಲ್ಲಿ ಹಲವು ಗ್ರಾಮಗಳು ಜಲಾವೃತಗೊಂಡಿದ್ದು, ಪ್ರವಾಹ ಪರಿಸ್ಥಿತಿಯುಂತಾಗಿದೆ. ಆಂಧ್ರದಲ್ಲಿ 100ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದು, 17 ಜನರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚಿನ ಮಾಹಿತಿ ಪ್ರಕಾರ ಆಂಧ್ರದಲ್ಲಿ ಕಟ್ಟಡ ಕುಸಿತದಿಂದಾಗಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಇನ್ನು ಕರ್ನಾಟಕದಲ್ಲಿಯೂ ಮಳೆಯ ಆರ್ಭಟ ಮುದುವರೆದಿದ್ದು, ಮಳೆಗೆ ವಿಜಯನಗರ ಜಿಲ್ಲೆಯ ಉಚ್ಚಂಗಿದುರ್ಗದ ಐತಿಹಾಸಿಕ ತಂಗುದಾಣ ಕುಸಿದು ಬಿದ್ದಿದೆ. ಬಳ್ಳಾರಿಯಲ್ಲಿ ರಾರಾವಿ ಬ್ರಿಡ್ಜ್ ಮೇಲೆ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಕೊಪ್ಪಳ ಜಿಲ್ಲೆಯಾದ್ಯಂತ ಭಾರಿ ಮಳೆಯಿಂದಾಗಿ ಭತ್ತದ ಬೆಳೆ ಸಂಪೂರ್ಣ ನೀರುಪಾಗಾವೆ. ರೈತರು ಕಣ್ಣೀರಿಟ್ಟಿದ್ದಾರೆ.
ಚಿಕ್ಕಮಗಳೂರಿನ ತರಿಕೆರೆಯಲ್ಲಿ ವ್ಯಕ್ತಿಯೋರ್ವ ಹಳ್ಳದಲ್ಲಿ ಕೊಚ್ಚಿ ಹೋಗಿದ್ದರೆ, ದಾವಣಗೆರೆಯಲ್ಲಿ ಕೊಟ್ಟಿಗೆ ಬಿದ್ದು 50 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಧಾರವಾಡದಲ್ಲಿಯೂ ಮಳೆ ಅವಾಂತರದಿಂದಾಗಿ ಕಡಲೆ ಬೆಳೆ ಸಂಪೂರ್ಣ ನಾಶವಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಮನೆಗಳಿಗೆ ನೀರು ನುಗ್ಗಿವೆ. ದೇವನಹಳ್ಳಿ ಬಳಿಯ ವಿಲ್ಲಾಗಳು ಜಲಾವೃತಗೊಂಡಿದ್ದು, ನಿವಾಸಿಗಳು ಮನೆಯಿಂದ ಹೊರಬರಲಾಗದೇ ಸಂಕಷ್ಟಕ್ಕೀಡಾಗಿದ್ದಾರೆ.
ನ. 25ರ ವರಗೆ ಭಾರಿ ಮಳೆ: ಸುರಕ್ಷಿತ ಸ್ಥಳಕ್ಕೆ ತೆರಳಲು ಜಿಲ್ಲಾಧಿಕಾರಿ ಸೂಚನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ