ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಧಾರಾಕಾರ ಮಳೆಯಾಗುತ್ತಿದ್ದು, ಕರ್ನಾಟಕದಲ್ಲಿ ಜುಲೈ 14ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 13ರವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲ್ಲಿ ಅಲೆಗಳ ರಭಸ ಜೋರಾಗಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಉತ್ತರ ಒಳನಾಡಿನ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ. ಚಿತ್ರದುರ್ಗ, ದಾವಣಗೆರೆ, ತುಮಕೂರು, ಮೈಸೂರು ಜಿಲ್ಲೆಗಳಲ್ಲಿಯೂ ಇಂದು ಸಾಧಾರಣ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೆಲವೆಡೆ ಮುಂಜಾನೆಯಿಂದ ತುಂತುರು ಮಳೆಯಾಗುತ್ತಿದ್ದು, ಹಲವೆಡೆ ಮೋಡಕವಿದವಾತಾವರಣವಿದ್ದು, ಭಾರಿ ಚಳಿಯಿಂದಾಗಿ ಜನರು ಮನೆಯಿಂದ ಹೊರಬರಲು ಯೋಚಿಸುವಂತಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಭಾನುವಾರ 11 ಕೊರೊನಾ ಪ್ರಕರಣಗಳು ಪತ್ತೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ