Latest

ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್; ರಾಜ್ಯದಲ್ಲಿ ನಾಲ್ಕು ದಿನ ಭಾರಿ ಮಳೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವರುಣಾರ್ಭಟ ಕೊಂಚ ಕಡಿಮೆಯಾಗುತ್ತಿದೆ ಎನ್ನುವಾಗಲೇ ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಹಾಗೂ ಮಲೆನಾಡಿನಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಹಾಸನ ಸೇರಿದಂತೆ ಪಶ್ಚಿಮಘಟ್ಟ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇನ್ನು 5 ದಿನಗಲ ಕಾಲ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಲಬುರ್ಗಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಳಗಾವಿಯಲ್ಲಿ ಗಾಂಜಾ ವಶ: ಓರ್ವನ ಬಂಧನ

Related Articles

Back to top button