Latest

ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ಕಳೆದ ಎರಡು ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳು ವರುಣನ ಆರ್ಭಟಕ್ಕೆ ತತ್ತರಿಸಿದ್ದು, ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಗದಗ, ಕೊಪ್ಪಳ, ಹಾವೇರಿ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ವಿಜಯಪುರ ಹಾಗೂ ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅ.15ರವರೆಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಕೊಡಗು ಜಿಲ್ಲೆಯಲ್ಲಿ ಅ.14ರವರೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದ್ದು, ನಾಳೆಯಿಂದ ಎರಡು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ತಿಳಿಸಿದೆ.

ಬೆಳಗಾವಿ: 3 ವಿಮಾನಗಳು ಲ್ಯಾಂಡ್ ಆಗದೆ ವಾಪಸ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button