
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಕೆಲ ಜಿಲ್ಲೆಗಳಲ್ಲಿ ಆಗಾಗ ಬಿರುಗಳಿ ಸಹಿತ ಸಾಧಾರಣ ಮಳೆಯಾಗುತ್ತಿದೆ. ಈ ನಡುವೆ ಮುಂದಿನ ವಾರ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕ, ಕೇರಳ, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ಉತ್ತರಾಖಂಡ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಉತ್ತರಾಖಂಡದಲ್ಲಿ ಮುಂದಿನ ಏಳು ದಿನಗಳಲ್ಲಿ ಭಾರಿ ಮಳೆಯಾಗಲಿದೆ.
ಆಗಸ್ಟ್ 25 ಹಾಗೂ 26ರಂದು ಪೂರ್ವ ರಾಜಸ್ಥಾನದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಹಿಮಾಚಲ ಪ್ರದೇಶದಲ್ಲಿಯೂ ಮಳೆಯಾಗಲಿದೆ. ಗುಜರಾತ್ ಸೇರಿದಂತೆ ಪಶ್ಚಿಮ ಹಾಗೂ ಮಧ್ಯ ಭರತದಲ್ಲಿ ವಾರವಿಡಿ ಹಗುರ ಮಳೆಯಾಗಲಿದೆ. ಮಹರಾಷ್ಟ್ರ, ಕೊಂಕಣ, ಸೌರಾಷ್ಟ್ರ ಪ್ರದೇಶಗಳಲ್ಲಿಯೂ ಆಗಸ್ಟ್ 26, 27 ಅತಿಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ