Kannada NewsKarnataka NewsLatest

*ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ; ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಜುಲೈ 27ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಕಹೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು ಹಾಗೂ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಹಾಸನ, ಯಾದಗಿರಿ, ಕಲಬುರ್ಗಿ, ಧಾರವಾಡ, ಬೆಳಗಾವಿ, ಬೀದರ್ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ಕರಾವಳಿ ಹಾಗು ದಕ್ಷಿಣ ಒಳನಾಡಿನಲ್ಲಿ ಚುರುಕಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button