ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಈಗಾಗಲೇ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶಗಳಲ್ಲಿ ಭಾರಿ ಮಳೆಯಿಂದಾಗಿ ಅನಾಹುತಗಳು ಸೃಷ್ಟಿಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ಚಂಡಮಾರುತದ ಭೀತಿ ಕೂಡ ಎದುರಾಗಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಹಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ತಮಿಳುನಾಡು, ಆಂದ್ರಪ್ರದೇಶ, ಕರ್ನಾಟಕ, ಪುದುಚೆರಿ ರಾಜ್ಯಗಳಲ್ಲಿ ಇನ್ನಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವೆಂಬರ್ 26ರಿಂದ ಡಿಸೆಂಬರ್ 15ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸೈಕ್ಲೋನ್ ಆಗಿ ಬದಲಾಗುವ ಸಾಧ್ಯತೆ ಇದೆ. ಅಲ್ಲದೇ ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ