
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಗಾವಿ, ಹುಬ್ಬಳ್ಳಿ-ಧಾರವಾಡದ ಬಳಿಕ ಇದೀಗ ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಾಗಿರುವ ಬಿಜೆಪಿ ಜೆಡಿಎಸ್ ಜೊತೆ ಮೈತ್ರಿಗೆ ಮುಂದಾಗಿದೆ. ಆದರೆ ಜೆಡಿಎಸ್ ನಾಯಕರು ತಮಗೆ ಮೇಯರ್ ಸ್ಥಾನ ನೀಡುವಂತೆ ಪಟ್ಟು ಹಿಡಿದಿದ್ದಾರೆ.
ಕಲಬುರ್ಗಿ ಪಾಲಿಕೆ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದು, ಒಂದೆಡೆ ಕಾಂಗ್ರೆಸ್ ನಾಯಕರು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಸರ್ಕಸ್ ನಡೆಸಿದ್ದರೆ ಇನ್ನೊಂದೆಡೆ ಬಿಜೆಪಿ-ಜೆಡಿಎಸ್ ಮೈತ್ರಿ ಬಹುತೇಕ ಫಿಕ್ಸ್ ಆಗಿದೆ. ಈ ನಡುವೆ ಜೆಡಿಎಸ್ ನಾಯಕರು ನಾವು ಯಾವುದೇ ಬೇರೆ ಪಕ್ಷಕ್ಕೆ ಬೆಂಬಲ ನೀಡಲ್ಲ, ಕಾಂಗ್ರೆಸ್ ಆಗಲಿ ಅಥವಾ ಬಿಜೆಪಿಯವರಾಗಲಿ ನಮಗೆ ಬೆಂಬಲ ನೀಡಿ, ಮೇಯರ್ ಸ್ಥಾನವನ್ನು ನಮಗೆ ನೀಡಲಿ ಎಂದು ಪಟ್ಟು ಹಿಡಿದಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಮೇಯರ್ ಸ್ಥಾನಕ್ಕಾಗಿ ಜೆಡಿಎಸ್ ಪಟ್ಟು ಆರಂಭಿಕ ಹಂತದ ಚರ್ಚೆ. ಒಂದು ವಿಚಾರ ವಿಶ್ವಾಸದಲ್ಲಿರಲಿ. ಕಲಬುರ್ಗಿ ಪಾಲಿಕೆಯಲ್ಲಿ ಮೇಯರ್ ಆಗುವುದು ಬಿಜೆಪಿಯವರೆ. ಬಿಜೆಪಿಗೆ ಮೇಯರ್ ಸ್ಥಾನ ಸಿಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿ ಪಾಲಿಕೆಯಲ್ಲಿ ಎಂಇಎಸ್ ಸೋಲು; ಭಾಷಾ ವಿವಾದ ಕಿಡಿ ಹೊತ್ತಿಸಲು ಮುಂದಾದ ಶಿವಸೇನೆ