Latest

ಚಳಿ ನಡುವೆಯೇ ಮತ್ತೆ ಭಾರಿ ಮಳೆ ಎಚ್ಚರಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮಳೆ ರಾಯನ ಅಬ್ಬರ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಸ್ವಲ್ಪದಿನದಿಂದ ತಣ್ಣಗಾಗಿದ್ದ ಮಳೆರಾಯ ಮತ್ತೆ ಅಬ್ಬರಿಸುವ ಸಾಧ್ಯತೆಯಿದೆ.

ಮಳೆ ಕಡಿಮೆಯಾಗಿ ವಿಪರೀತ ಚಳಿ ಆರಂಭವಾಗಿರುವ ನಡುವೆಯೇ ನಾಳೆಯಿಂದ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು, ಕರಾವಳಿ ಜಿಲ್ಲೆಗಳು ಉತ್ತರ ಒಳನಾಡಿನ ಕೆಲ ಜಿಲ್ಲೆಗಳು, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾತರ, ಮಂಡ್ಯ, ಮೈಸೂರು, ತುಮಕೂರು, ವಿಜಯಪುರ, ಹಾವೇರಿ, ರಾಮನಗರ ಸೇರಿದಂತೆ ವಿವಿಧ ಜಿಲೆಗಳಲ್ಲಿ ಮಳೆಯಾಗಲಿದೆ.

Home add -Advt

ಈಗಾಗಲೇ ಬೆಂಗಳೂರು ಹಾಗೂ ಕಾರಾವಳಿ ಜಿಲ್ಲೆಗಳು, ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಚಳಿಯಿಂದಾಗಿ ಜನರು ತತ್ತರಿಸುತ್ತಿದ್ದಾರೆ. ನವೆಂಬರ್ 24ರಿಂದ ಉತ್ತರ ಕರ್ನಾಟಕ ಭಾಗದಲ್ಲಿ ತಾಪಮಾನ ಇನ್ನಷ್ಟು ಕಡಿಮೆಯಾಗುವ ಸಾಧ್ಯತೆ ಬಗ್ಗೆ ತಜ್ಞರು ಮಾಹಿತಿ ನೀಡಿದ್ದಾರೆ. ಈ ನಡುವೆ ನಾಳೆಯಿಂದ ಮತ್ತೆ ಮಳೆ ಆರಂಭವಾಗಲಿರು ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದು ಜನರ ನಿದ್ದೆಗೆಡಿಸಿದೆ.

ಅಭ್ಯರ್ಥಿ ಘೋಷಣೆ ಮಾಡಲು ಸಿದ್ದರಾಮಯ್ಯಗೂ ಅಧಿಕಾರವಿಲ್ಲ; ಡಿ.ಕೆ.ಶಿವಕುಮಾರ್

https://pragati.taskdun.com/d-k-shivakumarreactioncongresss-candidates-list/

Related Articles

Back to top button