ಪ್ರಗತಿವಾತಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮಳೆ ಅಬ್ಬರ ಮತ್ತೆ ಜೋರಾಗಿದ್ದು, ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನಲ್ಲಿ ಸೆಪ್ಟೆಂಬರ್ 5ರವರೆಗೂ ಮಳೆಯಾಗಲಿದೆ.
ಬೆಂಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಕೊಡಗು, ರಾಮನಗರ, ತುಮಕೂರು, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇತ್ತೀಚೆಗಷ್ಟೇ ಸುರಿದ ಭಾರಿ ಮಳೆಯಿಂದ ಉಂಟಾದ ಪ್ರವಾಹ, ಭೂಕುಸಿತದಿಂದ ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕ, ಕರಾವಳಿ ಜಿಲ್ಲೆಗಳ ಹಲವು ಜನರು ಮನೆ ಮಠ ಕಳೆದುಕೊಂಡು ನಿರಾಶ್ರಿತರಾಗಿದ್ದರು. 283 ಗ್ರಾಮಗಳು, 45 ತಾಲೂಕುಗಳು ಮಳೆಯ ಹೊಡೆತಕ್ಕೆ ಸಿಕ್ಕಿದ್ದು, 36,498 ಜನರು ಸಂಕಷ್ಟಕ್ಕೀಡಾಗಿದ್ದರು. ಪರಿಹಾರ ಕಾರ್ಯಗಳು ನಡೆಯುತ್ತಿರುವ ನಡುವೆಯೇ ಇದೀಗ ಮತ್ತೆ ರಾಜ್ಯಾದ್ಯಂತ ಮಳೆ ಆರ್ಭಟ ಆರಂಭವಾಗಿದೆ.
ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ; ಪಿಎಸ್ ಐ ಬಂಧನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ