Latest

ಮುಂದಿನ 4 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಕಹೆ ಎಚ್ಚರಿಕೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 7ರಿಂದ 9ರವರೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 9ರವವರೆಗೆ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.

ಬೆಂಗಳೂರು, ರಾಮನಗರ, ಚಿಕ್ಕಮಗಳೂರು ಹಾಗೂ ಚಿತ್ರದುರ್ಗದಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಇನ್ನು ನಿನ್ನೆ ತಡರಾತ್ರಿ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ.
ಇಂದಿನ ಚಿನ್ನ-ಬೆಳ್ಳಿ ದರದಲ್ಲಿ ಬದಲಾವಣೆ ಏನು?

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button