ಪ್ರಗತಿವಾಹಿನಿ ಸುದ್ದಿ: ಭಾರಿ ಮಳೆಯಿಂದಾಗಿ ರೈಲ್ವೆ ಹಳಿಗಳ ಮೇಲೆ ಗುಡ್ಡ ಕುಸಿತವುಂಟಾಗಿದ್ದು, ಹಲವೆಡೆ ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಡಿದೆ.
ಮಹಾರಾಷ್ಟ್ರ, ಗೋವಾ, ಕರ್ನಾಟಕದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವೆಡೆ ರೈಲು ಹಳಿಗಳ ಮೇಲೆ ಗುಡ್ಡ ಕುಸಿದುಬಿದ್ದು ಅವಾಂತರ ಸೃಷ್ಟಿಯಾಗಿದೆ. ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆ ಸೇರಿದಂತೆ ಕೊಂಕಣದ ವಿವಿಧೆಡೆ 14 ಗಂಟೆಗಳ ಕಾಲ ರೈಲು ಸೇವೆ ಸ್ಥಗಿತಗೊಂಡಿದೆ.
ಕರಾವಳಿ ಭಾಗದ 12134 ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ಛತ್ರಪತಿ ಶಿವಾಜಿ ಮುಂಬೈ ಟರ್ಮಿನಲ್ ರೈಲು ರದ್ದಾಗಿದೆ. 12620 ಮತ್ಸ್ಯಗಂಧ ಮಂಗಳೂರು-ಮುಂಬೈ ರೈಲು ರದ್ದುಗೊಳಿಸಲಾಗಿದೆ.
ಮಂಗಳೂರು ಎಕ್ಸ್ ಪ್ರೆಸ್, ಕೊಂಕಣ ಕನ್ಯಾ ಎಕ್ಸ್ ಪ್ರೆಸ್, ತುಟಾರಿ ಎಕ್ಸ್ ಪ್ರೆಸ್, ಜನಶತಾಬ್ದಿ ಎಕ್ಸ್ ಪ್ರೆಸ್, ದಿವಾ ಸಾವಂತವಾಡಿ ಎಕ್ಸ್ ಪ್ರೆಸ್, ಸಾವಂತವಾಡಿ ಮದಗಾವ್ ಪ್ಯಾಸೇಂಜರ್ ರೈಲು ಸೇವೆ ತಾತ್ಕಲೈಕವಾಗಿ ಸ್ಥಗಿತಗೊಳಿಸಲಾಗಿದೆ. ಏಕಾಎಕಿ ರೈಲು ಸೇವೆ ಸ್ಥಗಿತಗೊಂಡಿರುವುದರಿಂದ ಪ್ರಯಾಣಿಕರು ರೈಲು ನಿಲ್ದಾಣಗಳಲ್ಲಿಯೇ ಪರದಾಡುವಂತಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ