ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ವಿವಿಧ ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಆಸ್ತಿ, ಪಾಸ್ತಿ, ಬೆಳೆ ಹಾನಿ ಉಂಟಾಗಿದ್ದು ರಾಜ್ಯ ಸರ್ಕಾರ ತುರ್ತು ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ನೆರೆ ಸಂತ್ರಸ್ತರಿಗೆ ತುರ್ತು ಪರಿಹಾರ ನೀಡುವಂತೆ ರಾಜ್ಯ ಸರ್ಕಾರ ಜಿಲ್ಲಾಡಳಿತಗಳಿಗೆ ಆದೇಶ ಹೊರಡಿಸಿದೆ. ಎಸ್ ಡಿಆರ್ ಎಫ್ ನಿಧಿಯಡಿ ಅನುದಾನ ಬಿಡುಗಡೆ ಮಾಡುವಂತೆ ಸೂಚನೆ ನೀಡಿದ್ದು, ಅದರಂತೆ 418.72 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ.
ಈ ನಡುವೆ ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಲಿದ್ದು, ನ.26ರಿಂದ ಡಿಸೆಂಬರ್ 15ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ