Belagavi NewsBelgaum NewsKarnataka News

ಕರ್ನಾಟಕದಾದ್ಯಂತ ಮೇ 24ರವರೆಗೂ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ

ಪ್ರಗತಿವಾಹಿನಿ ಸುದ್ದಿ : ಕರ್ನಾಟಕದಾದ್ಯಂತ ಮೇ 24ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು 15 ಜಿಲ್ಲೆಗಳಲ್ಲಿ ಎಲ್ಲೋ ಹಾಗೂ ಆರೆಂಜ್ ಅಲರ್ಟ್ ಮತ್ತು 3 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು, ಮೈಸೂರು, ಮಂಡ್ಯ ಕೋಲಾರ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ಕೊಪ್ಪಳ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೇ 21 ರಂದು ಅತೀ ಹೆಚ್ಚು ಮಳೆ ಅಂದರೆ ಗರಿಷ್ಠ 200 ಮಿಲಿ ಮೀಟರ್ ಗೂ ಹೆಚ್ಚು ಮಳೆ ಬರಲಿರುವ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.

ಮೇ 23ರವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆ ಬರಲಿದ್ದು ಇದೇ ಅವಧಿಯಲ್ಲಿ ಒಳನಾಡಿನ ಇತರ ಜಿಲ್ಲೆಗಳಿಗೆ ಪ್ರತ್ಯೇಕ ದಿನಗಳಂದು ಸಾಧಾರಣದಿಂದ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

Related Articles

Back to top button