Belagavi NewsBelgaum News

*ಇಂದು 11 ಜಿಲ್ಲೆಗಳಲ್ಲಿ ಭಾರಿ ಮಳೆಯ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಇಂದು ರಾಜ್ಯದ ಹಲವಾರು ಜಿಲ್ಲೆಗಳಿಗೆ ಭಾರಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ

ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳ ಕೆಲವೆಡೆ ಪ್ರತಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ. ಕರಾವಳಿ ಉದ್ದಕ್ಕೂ 35ರಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಎಚ್ಚರ ವಹಿಸಬೇಕು ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ನಿರಂತರ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

Home add -Advt

ಶನಿವಾರವೂ ಕರಾವಳಿ ಸೇರಿ ರಾಜ್ಯ ವಿವಿಧೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ತಲಾ ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಹಾಗೂ ಯೆಲ್ಲೊ ಅಲರ್ಟ್ ಘೋಷಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button