Belagavi NewsBelgaum NewsKarnataka News

*ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ಅಬ್ಬರಿಸಲಿದೆ ಮಳೆ: ಇಲ್ಲಿದೆ ಸಂಪೂರ್ಣ ಮಾಹಿತಿ*

ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಈಗಾಗಲೇ ಮುಂಗಾರು ಮಳೆ ಆರಂಭವಾಗಿದೆ. ಒಂದೆರೆಡು ದಿನಗಳಿಂದ ಅಲ್ಲಲ್ಲಿ ಮಳೆ ಆಗಿದ್ದು, ಇಂದಿನಿಂದ ನಾಲ್ಕು ದಿನ ಎಲ್ಲೆಡೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಪ್ರಕಾರ ರಾಜ್ಯದ  ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಹಾಗಾಗಿ 28 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ ರಾಮನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಶಿವಮೊಗ್ಗ ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಬಳ್ಳಾರಿ, ವಿಜಯನಗರ, ಕೋಲಾರ ಜಿಲ್ಲೆಯಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಗಾಳಿ, ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.

ಇದಲ್ಲದೆ ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ ಜಿಲ್ಲೆಯ ಕೆಲವು ಕಡೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿಯೊಂದಿಗೆ ಭಾರಿ ಮಳೆ ಆಗುವ ಸಾಧ್ಯತೆ ಇದೆ.

ಕಲಬುರಗಿ, ಬೀದ‌ರ್, ಹಾವೇರಿ, ಬೆಳಗಾವಿ, ಧಾರವಾಡ, ಯಾದಗಿರಿ ಜಿಲ್ಲೆಯ ಹಲವು ಕಡೆ ಬಿರುಗಾಳಿ ಸಹಿತ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button