
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಅಬ್ಬರಿಸುತ್ತಿರುವ ಮಳೆ ಮತ್ತಷ್ಟು ಚುರುಕುಗೊಂಡಿದೆ. ಮುಂದಿನ ಐದಾರು ದಿನ ಹೆಚ್ಚಿನ ಮಳೆ ಆಗಲಿದೆ ಎಂದು ಹವಾಮಾನ ಇಲಾಳೆ ಮಾಹಿತಿ ನೀಡಿದೆ.
ಇಂದು ಮತ್ತು ನಾಳೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇವತ್ತು ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಹಾಗೆಯೇ ದಕ್ಷಿಣ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಹುತೇಕ ಸ್ಥಳಗಳಲ್ಲಿ ಮಳೆಯಾಗಲಿದೆ.
ಆಗಸ್ಟ್ 5 ರಂದು ಬೆಂಗಳೂರು ನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಭಾರಿ ಮಳೆಯ ಹಿನ್ನೆಲೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಆಗಸ್ಟ್ 6ರಿಂದ 3 ದಿನ ಹಾಸನ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಆಗಲಿದೆ ಎಂದು ಅಂದಾಜಿಸಲಾಗಿದೆ. ಕಳೆದ 4 ದಿನಗಳಿಂದ ಮುಂಗಾರು ಮಳೆ ಅಬ್ಬರ ಕೊಂಚ ತಣ್ಣಗಾಗಿತ್ತು, ಆಗಸ್ಟ್ 6ರಂದು ನಂತರ ಮೂರು ದಿನ ಹಾಸನ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಆಗಲಿದ್ದು, ಆರೆಂಜ್ ಇದೀಗ ಮತ್ತೆ ಆಗಸ್ಟ್ 05ರಿಂದ ರಾಜ್ಯವ್ಯಾಪಿ ಮುಂಗಾರು ಸಕ್ರಿಯವಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಇನ್ನು ಆಗಸ್ಟ್ 7 ಮತ್ತು 8ರಂದು ಕರಾವಳಿ ಜಿಲ್ಲೆಗಳು, ಒಳನಾಡಿನ ರಾಯಚೂರು, ಗದಗ, ಕೊಪ್ಪಳ, ಹಾವೇರಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬಂಗಾಳಕೊಲ್ಲಿ ಅರಬ್ಬಿ ಸಮುದ್ರದಲ್ಲಿ ಮೇಲ್ಮನಲ್ಲಿ ಉಂಟಾಗಿರೋ ನಿರಂತರ ಬದಲಾವಣೆಯು ಸಹ ಮುಂಗಾರು ಮಳೆ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.