Belagavi NewsBelgaum NewsKannada NewsKarnataka News

*ಏ.24 ರವರೆಗೂ ಬಿಳಲಿದೆ ಜೋರಾದ ಮಳೆ*

ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಏಪ್ರಿಲ್ 24 ರವರೆಗೂ ಮಳೆ ಜೋರಾಗಿ ಸುರಿಯುವ ಲಕ್ಷಣಗಳಿವೆ ಎಂದು ಹವಾಮಾನ ಇಲಾಖೆ ಹೇಳಿದೆ.

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಪ್ರಮುಖವಾಗಿ ಬಾಗಲಕೋಟೆ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ.

Home add -Advt

ಇನ್ನು ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿಯೂ ಸಹ ಭಾರಿ ಗಾಳಿ ಹಾಗೂ ಗುಡುಗು ಸಹಿತ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.

ಹಾಗೆಯೇ ದಕ್ಷಿಣ ಒಳನಾಡಿನ ಶಿವಮೊಗ್ಗ ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ಬಳ್ಳಾರಿ, ವಿಜಯನಗರ ಸೇರಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ವೇಗದ ಗಾಳಿ ಬೀಸಲಿದ್ದು ಒಂದೆರಡು ಕಡೆ ಮಳೆಯಾಗುವ ಸಂಭವವಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ವಿಭಿನ್ನ ಹವಾಮಾನ ಕಂಡುಬರಲಿದೆ. ಇಲ್ಲಿನ ಕೆಲವು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.ಒಟ್ಟಾರೆಯಾಗಿ ಹವಾಮಾನವು ಶುಷ್ಕವಾಗಿರಲಿದ್ದು, ಸೆಕೆ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Related Articles

Back to top button