Belagavi NewsBelgaum NewsKannada NewsKarnataka NewsNational

*ಮುಂದಿನ 24 ಗಂಟೆ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ:  ಮುಂದಿನ 24 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆಯು ಈ ಮೂರೂ ಜಿಲ್ಲೆಗಳಿಗೆ ‘ರೆಡ್ ಅಲರ್ಟ್ ಘೋಷಿಸಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ಈಗಾಗಲೇ ರಜೆ ಘೋಷಿಸಿದೆ. 

Home add -Advt

ಇನ್ನು ಮಲೆನಾಡು ಭಾಗದ ಶಿವಮೊಗ್ಗ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಘಟ್ಟ ಪ್ರದೇಶಗಳಲ್ಲಿ ‘ಆರೆಂಜ್ ಅಲರ್ಟ್’ ನೀಡಲಾಗಿದೆ.

ಮತ್ತೊಂದೆಡೆ, ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು ಮತ್ತು ಮಂಡ್ಯ ಸೇರಿದಂತೆ ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ದಿನವಿಡೀ ತಂಪಾದ ಗಾಳಿ ಬೀಸಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. 

Related Articles

Back to top button