Belagavi NewsBelgaum NewsKannada NewsKarnataka News

*ಮುಂದಿನ 6 ದಿನ ಭಾರಿ ಮಳೆ: 6 ಜಿಲ್ಲೆಯಲ್ಲಿ ರೆಡ್ ಅಲರ್ಟ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆರಾಯ ಎಲ್ಲಡೆ ಸುರಿಯುತ್ತಿದ್ದು, ಮುಂದಿನ 6 ದಿನ ಅಂದರೆ ಜುಲೈ 10ರ ವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಯಾಗುವ ಮುನ್ಸೂಚನೆಯನ್ನು ಕೂಡ ಹವಾಮಾನ ಇಲಾಖೆ ನೀಡಿದೆ.

Home add -Advt

ಇಂದು ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, 

ಬೆಳಗಾವಿ,ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಧಾರವಾಡಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

Related Articles

Back to top button