Belagavi NewsBelgaum NewsKarnataka News

*ಮೂರ್ನಾಲ್ಕು ದಿನ ಭಾರಿ ಮಳೆ: 14 ಜಿಲ್ಲೆಯಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ : ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ 14ಕ್ಕೂ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ 3-4 ದಿನಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಳಗಾವಿ, ಧಾರವಾಡ, ಗದಗ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ ಕೋಲಾರ, ಮೈಸೂರು, ಮಂಡ್ಯ ಕೊಡಗು, ಹಾಸನ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾವೇರಿ

Home add -Advt

ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಂತಹ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಸೇರಿದಂತೆ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಕರಾವಳಿ ಕರ್ನಾಟಕದ ಭಾಗಗಳು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದ‌ರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Related Articles

Back to top button