Belagavi NewsBelgaum NewsKannada NewsKarnataka News

*ಇಂದಿನಿಂದ ಅ.12ರವರೆಗೆ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇಂದಿನಿಂದ ಅ.12ರವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ.

ಅ.8ರಿಂದ 10ರವರೆಗೆ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ರಾಮನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಹಾಸನ, ಚಾಮರಾಜನಗರ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ನೀಡಿದೆ.

Home add -Advt

ಇದೇ ವೇಳೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

Related Articles

Back to top button